ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರು ಹಾಗೂ ಸಿಬ್ಬಂದಿ ವಿರುದ್ಧ ಲೋಕಾಯುಕ್ತ ನ್ಯಾ. ಭಾಸ್ಕರ್ ರಾವ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


 ತಮ್ಮ ಕೋಲಾರ ಭೇಟಿ ಸಂದರ್ಭದಲ್ಲಿ ಸ್ಥಳೀಯ ಸರ್ಕಾರಿ ಕಾಲೇಜುಗಳ ಅವ್ಯವಸ್ಥೆ ಹಾಗೂ ಉಪನ್ಯಾಸಕರ ಗೈರು ಹಾಜರಿ ಹಿನ್ನೆಲೆಯಲ್ಲಿ ಇಲಾಖೆ ಆಯುಕ್ತರು ಹಾಗೂ ಅಧಿಕಾರಿಗಳ ಜತೆ ನಡೆಸಿದ ಸಭೆಯಲ್ಲಿ ಈ ಅಸಮಾಧಾನ ವ್ಯಕ್ತಪಡಿಸಿದ ಅವರು, ಮೂರು ತಿಂಗಳಿಗೊಮ್ಮೆ ಕಾಲೇಜುಗಳ ಸ್ಥಿತಿಗತಿ ಹಾಗೂ ನಿರ್ವಹಣೆ ಸಂಬಂಧ ಲೋಕಾಯುಕ್ತಕ್ಕೆ ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ. 

ಇದರ ಜತೆಗೆ ನಾಲ್ಕು ಮಹತ್ವದ ಸೂಚನೆಯನ್ನು ಇಲಾಖೆಗೆ ನೀಡಿದ್ದಾರೆ. 

  • ರಾಜ್ಯದ ಎಲ್ಲ ಜಿಲ್ಲೆಗಳಲ್ಲಿರುವ ಸರ್ಕಾರಿ ಕಾಲೇಜುಗಳಲ್ಲಿ ಉಪನ್ಯಾಸಕರ ಹಾಜರಿ ಸಮಸ್ಯೆ ಇದೆ. ಹೀಗಾಗಿ ಎಲ್ಲ ಕಾಲೇಜುಗಳಲ್ಲಿ ಬಯೋವುಟ್ರಿಕ್ ಹಾಜರಿ ವ್ಯವಸ್ಥೆ ಕಲ್ಪಿಸಬೇಕು.
  • ಇಲಾಖೆ ಆಯುಕ್ತರು, ನಿರ್ದೇಶಕರು ಹಾಗೂ ಜಂಟಿ ನಿರ್ದೇಶಕರು ಪ್ರತಿ ತಿಂಗಳು ಕನಿಷ್ಠ ಐದು ಕಾಲೇಜುಗಳಿಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಬೇಕು. ಮಾತ್ರವಲ್ಲ ಈ ಬಗ್ಗೆ ಲೋಕಾಯುಕ್ತ ನಿಬಂಧಕರಿಗೆ ವಸ್ತುಸ್ಥಿತಿ ವರದಿ ನೀಡಬೇಕು.
  • ರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳ ಗುಣಮಟ್ಟ ಹೆಚ್ಚಿಸುವ ಜತೆಗೆ ಫಲಿತಾಂಶದ ಪ್ರಮಾಣ ಜಾಸ್ತಿಯಾಗುವಂತೆ ಕ್ರಮಕೈಗೊಳ್ಳಬೇಕು.

Courtesy: Kannada Prabha, August 3, 2013

Copyright © 2013 amuct.org. All Rights Reserved | Powered by eCreators
Home | News | Sitemap | Contact

Contact Us

OFFICE:
AMUCT, I Floor, Nithyananda Complex,
A.S.R.P. Road,
Near Nava Bharath Circle,
Kodialbail, Mangalore- 575 003

 

E-Mail: This email address is being protected from spambots. You need JavaScript enabled to view it.
E-Mail: This email address is being protected from spambots. You need JavaScript enabled to view it.